Thursday, November 05, 2015

ವಿಧಾನ ಮಂಡಲದ ಬಾಗಿಲಿಗೆ ಪಂಚಾಯತ್ ರಾಜ್ ತಿದ್ದುಪಡಿ ಮಸೂದೆ

ಬೆಂಗಳೂರು : ಪಂಚಾಯತ್ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ, ಅಧ್ಯಕ್ಷರ ಅವಧಿ ಐದು ವರ್ಷ ನಿಗದಿ ಸೇರಿದಂತೆ 110 ಕ್ಕೂ ಹೆಚ್ಚು ತಿದ್ದುಪಡಿಗಳನ್ನು ಮಾಡಿ ಗ್ರಾಮ್ ಸ್ವರಾಜ್ ಹೆಸರಿನಲ್ಲಿ ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಯನ್ನು ನವೆಂಬರ್ 16 ರಂದು ಪ್ರಾರಂಭವಾಗಲಿರುವ ರಾಜ್ಯ ವಿಧಾನ ಮಂಡಲದಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
     ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಉನ್ನತ ಶಿಕ್ಷಣ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಅವರು ಪತ್ರಿಕಾ ಗೋಷ್ಠಿಯಲ್ಲಿ ಸಂಪುಟ ಸಭೆಯ ವಿವರಗಳನ್ನು ನೀಡಿದರು.
     ಕರ್ನಾಟಕ ಪಂಚಾಯತ್ ರಾಜ್ ನಿಯಮಗಳ ಬದಲಾವಣೆ ಕುರಿತು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಅವರ ನೇತೃತ್ವದ ಸಮಿತಿ ನೀಡಿರುವ ವರದಿ ಹಾಗೂ ಸಚಿವ ಸಂಪುಟದ ಉಪ ಸಮಿತಿಯ ಶಿಫಾರಸ್ಸುಗಳ ಜೊತೆಗೆ ಹಲವು ಬದಲಾವಣೆ ಮಾಡುವ ಸಂಬಂಧ ಮಸೂದೆ ತರಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಂವಿಧಾನದ 73 ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳನ್ನು ಬಲಪಡಿಸುವುದರ ಜೊತೆಗೆ ಅಧಿಕಾರಾವಧಿಯನ್ನು ಐದು ವರ್ಷಗಳ ಕಾಲ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಧಿ ಇರಬೇಕೆಂಬ ತಿದ್ದುಪಡಿಗೆ ಸಂಪುಟ ಒಪ್ಪಿಗೆ ನೀಡಿತು.

No comments:

Post a Comment